Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:4 - ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:4
36 ತಿಳಿವುಗಳ ಹೋಲಿಕೆ  

ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.


ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.


ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.”


ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.


ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಅವರನ್ನು ಕಳುಹಿಸಲಾರದೆ ಹೋದನು.


ಏಕೆಂದರೆ ಫರೋಹನು ಇಸ್ರಾಯೇಲರ ವಿಷಯದಲ್ಲಿ, ‘ಅವರು ಗಲಿಬಿಲಿಗೊಂಡು ಮರುಭೂಮಿಯನ್ನು ಸುತ್ತುವರಿದ ಪ್ರದೇಶದಲ್ಲಿ ಅತ್ತಿತ್ತ ಹೋಗುತ್ತಿರುವರು,’ ಎಂದುಕೊಳ್ಳುವನು.


ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.


ಈಜಿಪ್ಟಿನವರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆ ಸವಾರರೂ ಅವರನ್ನು ಹಿಂದಟ್ಟಿ, ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.


ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲರು ಮಾಡಿದರು.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.


ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು