Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:14 - ಕನ್ನಡ ಸಮಕಾಲಿಕ ಅನುವಾದ

14 ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜನಾಂಗಗಳು ಇದನ್ನು ಕೇಳಿ ನಡುಗುವರು. ಫಿಲಿಷ್ಟಿಯದಲ್ಲಿ ವಾಸಿಸುವವರು ಭಯಭೀತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜನಾಂಗಗಳು ಇದನ್ನು ಕೇಳಿ ನಡುಗುತ್ತಿರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:14
20 ತಿಳಿವುಗಳ ಹೋಲಿಕೆ  

ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.


ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು.


ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.


ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.


ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.


“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.


ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.


ಈಜಿಪ್ಟಿನಿಂದ ಸುದ್ದಿ ಆದ ಹಾಗೆ ಟೈರಿನ ಸುದ್ದಿಗೆ ಬಹಳ ವೇದನೆ ಪಡುವರು.


ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.


ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.


ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು