Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:16 - ಕನ್ನಡ ಸಮಕಾಲಿಕ ಅನುವಾದ

16 ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:16
34 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.


ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.


ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.


ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.


ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?


ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


“ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.


ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.


ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.


ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.


ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು