Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:17 - ಕನ್ನಡ ಸಮಕಾಲಿಕ ಅನುವಾದ

17 ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನು ನಿನ್ನ ಜನರನ್ನು ನಿನ್ನ ಬೆಟ್ಟದ ಸೀಮೆಗೂ ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:17
24 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.


ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.


“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.”


ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.


ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು.


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.


ಯೆಹೂದವು ದೇವರ ಪರಿಶುದ್ಧ ಸ್ಥಳವಾಯಿತು, ಇಸ್ರಾಯೇಲು ದೇವರ ರಾಜ್ಯವಾಯಿತು.


“ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.


ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.


ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.


ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು