ವಿಮೋಚನಕಾಂಡ 15:21 - ಕನ್ನಡ ಸಮಕಾಲಿಕ ಅನುವಾದ21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…” ಅಧ್ಯಾಯವನ್ನು ನೋಡಿ |