Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:22 - ಕನ್ನಡ ಸಮಕಾಲಿಕ ಅನುವಾದ

22 ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:22
12 ತಿಳಿವುಗಳ ಹೋಲಿಕೆ  

ಯೆಹೋವ ದೇವರ ದೂತನು ಮರುಭೂಮಿಯಲ್ಲಿ ಶೂರಿನ ಮಾರ್ಗವಾಗಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಹಾಗರಳನ್ನು ಕಂಡು,


ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,


ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.


“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.


ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.


ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.


ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.


ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.


ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.


ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.


ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು