Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:7 - ಕನ್ನಡ ಸಮಕಾಲಿಕ ಅನುವಾದ

7 “ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನಗೆದುರಾಗಿ ನಿಲ್ಲುವವರನ್ನು ಕೆಡವಿಬಿಡುತ್ತೀ, ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಭಸ್ಮ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಅತ್ಯಧಿಕ ಮಹತ್ವವುಳ್ಳವನಾಗಿ, ನಿನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. ಬೆಂಕಿಯು ಹುಲ್ಲನ್ನು ಸುಡುವಂತೆ ನಿನ್ನ ಕೋಪವು ಅವರನ್ನು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:7
29 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.


“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.


ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.


ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.


ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.


ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.


“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.


ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.


ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.


ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.


ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.


ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ಮೊದಲಿನಂತೆ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಯೆಹೋವ ದೇವರು ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.


ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು