ವಿಮೋಚನಕಾಂಡ 15:8 - ಕನ್ನಡ ಸಮಕಾಲಿಕ ಅನುವಾದ8 ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಮೂಗಿನ ಶ್ವಾಸದಿಂದ ಸಮುದ್ರದ ನೀರು ಒಟ್ಟುಗೂಡಿದವು; ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು; ಸಾಗರದಾಳದೊಳಗಿನ ನೀರು ಗಟ್ಟಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಸಿಟ್ಟಿನಿಂದ ಮುಸುಗರೆದಾಗ ಸಮುದ್ರದ ನೀರು ಒಡ್ಡಿನಂತಾಯಿತು. ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು. ಸಾಗರ ಗರ್ಭದೊಳಗಣ ಜಲವು ಗಟ್ಟಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ಊದಿದ ಮಹಾಗಾಳಿಯಿಂದ ನೀರು ಒತ್ತಟ್ಟಿಗೆ ಸೇರಿತು. ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು. ಅಧ್ಯಾಯವನ್ನು ನೋಡಿ |