ವಿಮೋಚನಕಾಂಡ 16:10 - ಕನ್ನಡ ಸಮಕಾಲಿಕ ಅನುವಾದ10 ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು. ಅಧ್ಯಾಯವನ್ನು ನೋಡಿ |