ವಿಮೋಚನಕಾಂಡ 16:12 - ಕನ್ನಡ ಸಮಕಾಲಿಕ ಅನುವಾದ12 “ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |