ವಿಮೋಚನಕಾಂಡ 16:15 - ಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ಇದೇನಿರಬಹುದು ಎಂದು ಹೇಳಿಕೊಂಡರು. ಮೋಶೆ ಅವರಿಗೆ - ಇದು ಯೆಹೋವನು ನಿಮಗೋಸ್ಕರ ಕೊಟ್ಟ ಆಹಾರವು; ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ. ಅಧ್ಯಾಯವನ್ನು ನೋಡಿ |