ವಿಮೋಚನಕಾಂಡ 16:16 - ಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರು, ‘ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ. ಪ್ರತಿಯೊಬ್ಬನಿಗೆ ಸುಮಾರು ಒಂದು ಕಿಲೋಗ್ರಾಂದಷ್ಟು ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತೆಗೆದುಕೊಳ್ಳಿರಿ,’ ಎಂದು ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದರ ವಿಷಯದಲ್ಲಿ ಅವರು ನಿಮಗೆ ಆಜ್ಞಾಪಿಸುವುದನ್ನು ಕೇಳಿ; ‘ಪ್ರತಿಯೊಬ್ಬನು ತನ್ನ ಕುಟುಂಬದ ಸಂಖ್ಯಾನುಸಾರ ತಲೆಗೆ ಮೂರು ಸೇರಂತೆ, ಅಂದರೆ ಒಬ್ಬೊಬ್ಬನು ಸರಾಸರಿ ತಿನ್ನುವಷ್ಟನ್ನು ತನ್ನ ಡೇರೆಯಲ್ಲಿರುವವರಿಗಾಗಿ ಕೂಡಿಸಿಕೊಳ್ಳಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಒಂದು ಗೋಮೆರಿನ ಮೇರೆಗೆ ತನ್ನ ಡೇರೆಯವರಿಗೋಸ್ಕರ ಕೂಡಿಸಿಕೊಳ್ಳಲಿ; ಒಬ್ಬೊಬ್ಬನು ಅಷ್ಟೇ ಸರಾಸರಿಯಾಗಿ ತಿನ್ನುವದುಂಟಲ್ಲವೇ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಪ್ರತಿಯೊಬ್ಬನು ತನಗೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ಕುಟುಂಬದಲ್ಲಿರುವ ಪ್ರತಿಯೊಬ್ಬನಿಗೆ ಸುಮಾರು ಮೂರು ಸೇರಿನಷ್ಟು ಕೂಡಿಸಿಕೊಳ್ಳಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |