ವಿಮೋಚನಕಾಂಡ 16:18 - ಕನ್ನಡ ಸಮಕಾಲಿಕ ಅನುವಾದ18 ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ಅದನ್ನು ಸೇರಿನಿಂದ ಅಳತೆಮಾಡಿದರು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನೂ ತನ್ನ ಭೋಜನಕ್ಕೆ ಸರಿಯಾಗುವಷ್ಟನ್ನು ಕೂಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ; ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು. ಅಧ್ಯಾಯವನ್ನು ನೋಡಿ |