Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:21 - ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನುವಷ್ಟು ಪ್ರತಿದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜನರು ಪ್ರತಿದಿನ ಮುಂಜಾನೆಯಲ್ಲಿ ತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಾದಾಗ ಅದು ಕರಗಿಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜನರು ತಮ್ಮ ತಮ್ಮ ಊಟಕ್ಕೆ ತಕ್ಕಷ್ಟನ್ನು ದಿನದಿನವೂ ಬೆಳಿಗ್ಗೆ ಹೊತ್ತು ಕೂಡಿಸಿಕೊಂಡರು. ಬಿಸಿಲು ಏರಿದಾಗ ಮಿಕ್ಕದ್ದು ಕರಗಿಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜನರು ದಿನದಿನಕ್ಕೆ ಹೊತ್ತಾರೆಯಲ್ಲಿ ತಮ್ಮತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಿದಾಗ ಅದು ಕರಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಎಷ್ಟು ತಿನ್ನಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:21
8 ತಿಳಿವುಗಳ ಹೋಲಿಕೆ  

ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಆದರೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನವರೆಗೆ ಇಟ್ಟುಕೊಂಡಾಗ, ಅದು ಹುಳ ಬಿದ್ದು ಹೊಲಸುವಾಸನೆ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿಕೊಂಡನು.


ಆರನೆಯ ದಿನದಲ್ಲಿ ಅವರು ಎರಡರಷ್ಟು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು