Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:3 - ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:3
32 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ.


ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.


ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.


ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?


ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.


ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


“ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?


ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.


ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.


ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.


ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.


ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.


ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.


ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?


ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?


ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.


ನೀವು, ‘ಇಲ್ಲ, ನಾವು ಈಜಿಪ್ಟ್ ದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧವನ್ನು ನೋಡುವುದಿಲ್ಲ, ತುತೂರಿಯ ಶಬ್ದವನ್ನು ಕೇಳುವುದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವುದಿಲ್ಲ.’ ಅಲ್ಲಿ ವಾಸಮಾಡುವೆವೆಂದು ಹೇಳಿದರೆ,


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ?


ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.


ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು