Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:32 - ಕನ್ನಡ ಸಮಕಾಲಿಕ ಅನುವಾದ

32 ಮೋಶೆಯು ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ: ‘ನಾನು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಡಿಸಿದಾಗ, ಮರುಭೂಮಿಯಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ್ ಮನ್ನವನ್ನು ತುಂಬಿಸಿ ಇಟ್ಟಿರಬೇಕು,’ ಎಂಬುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮೋಶೆಯು ಜನರಿಗೆ - ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ - ನಾನು ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಅರಣ್ಯದಲ್ಲಿ ತಿನ್ನುವದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ನೀವು ಒಂದು ಗೋಮೆರ್ ತುಂಬಾ ಮನ್ನವನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:32
11 ತಿಳಿವುಗಳ ಹೋಲಿಕೆ  

ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.


ಯೆಹೋವ ದೇವರು, ‘ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ. ಪ್ರತಿಯೊಬ್ಬನಿಗೆ ಸುಮಾರು ಒಂದು ಕಿಲೋಗ್ರಾಂದಷ್ಟು ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತೆಗೆದುಕೊಳ್ಳಿರಿ,’ ಎಂದು ಹೇಳಿದ್ದಾರೆ,” ಎಂದನು.


ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.


ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು