ವಿಮೋಚನಕಾಂಡ 16:33 - ಕನ್ನಡ ಸಮಕಾಲಿಕ ಅನುವಾದ33 ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದಕಾರಣ ಮೋಶೆಯು ಆರೋನನಿಗೆ - ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಗೋಮೆರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವದಕ್ಕೋಸ್ಕರ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |