ವಿಮೋಚನಕಾಂಡ 16:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು. ಅಧ್ಯಾಯವನ್ನು ನೋಡಿ |