Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:8 - ಕನ್ನಡ ಸಮಕಾಲಿಕ ಅನುವಾದ

8 ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:8
17 ತಿಳಿವುಗಳ ಹೋಲಿಕೆ  

ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.


ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


“ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.


ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”


“ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.


ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?


ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.


ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.


“ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.


ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು.


ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು