ವಿಮೋಚನಕಾಂಡ 16:9 - ಕನ್ನಡ ಸಮಕಾಲಿಕ ಅನುವಾದ9 ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆರೋನನಿಗೆ ಮೋಶೆ, “ನೀನು ಇಸ್ರಯೇಲ್ ಸಮಾಜದ ಬಳಿಗೆ ಹೋಗಿ, ಅವರಿಗೆ, ‘ಸರ್ವೇಶ್ವರ ನಿಮ್ಮ ಗೊಣಗಾಟವನ್ನು ಕೇಳಿದ್ದಾರೆ. ಆದ್ದರಿಂದ ನೀವೆಲ್ಲರು ಅವರ ಸನ್ನಿಧಿಗೆ ಕೂಡಿಬರಬೇಕು, ಎಂದು ಆಜ್ಞಾಪಿಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ಮೋಶೆಯು ಆರೋನನಿಗೆ - ನೀನು ಇಸ್ರಾಯೇಲ್ಯರ ಸಮೂಹದ ಬಳಿಗೆ ಹೋಗಿ ಅವರಿಗೆ - ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನಾದದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಕೂಡಿ ಬರಬೇಕೆಂದು ಆಜ್ಞಾಪಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗೊಣಗುಟ್ಟುವಿಕೆಯನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು. ಅಧ್ಯಾಯವನ್ನು ನೋಡಿ |