ವಿಮೋಚನಕಾಂಡ 17:1 - ಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ತರುವಾಯ ಇಸ್ರಾಯೇಲ್ಯರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಪ್ರಕಾರ ಸೀನ್ ಎಂಬ ಅರಣ್ಯದಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀವಿುನಲ್ಲಿ ಇಳುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲರೆಲ್ಲರೂ ಸಿನ್ ಮರುಭೂಮಿಯಿಂದ ಒಟ್ಟಾಗಿ ಪ್ರಯಾಣಮಾಡಿದರು. ಯೆಹೋವನು ಆಜ್ಞಾಪಿಸಿದಂತೆಲ್ಲಾ ಅವರು ಸ್ಥಳದಿಂದ ಸ್ಥಳಕ್ಕೆ ಪ್ರಯಾಣಮಾಡಿದರು. ಅವರು ರೆಫೀದೀಮಿಗೆ ಪ್ರಯಾಣಮಾಡಿ ಅಲ್ಲಿ ತಂಗಿದರು. ಅವರಿಗೆ ಕುಡಿಯಲು ಅಲ್ಲಿ ನೀರಿರಲಿಲ್ಲ. ಅಧ್ಯಾಯವನ್ನು ನೋಡಿ |