Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:11 - ಕನ್ನಡ ಸಮಕಾಲಿಕ ಅನುವಾದ

11 ಮೋಶೆಯು ತನ್ನ ಕೈಯನ್ನು ಎತ್ತಿದಾಗ, ಇಸ್ರಾಯೇಲರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗಲೆಲ್ಲಾ ಇಸ್ರಯೇಲರು ಜಯಶೀಲರಾಗುತ್ತಿದ್ದರು, ಇಳಿಸುವಾಗಲೆಲ್ಲಾ ಅಮಾಲೇಕ್ಯರು ಜಯಶೀಲರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗ ಇಸ್ರಾಯೇಲ್ಯರು ಬಲವಾಗುವರು; ಇಳಿಸುವಾಗ ಅಮಾಲೇಕ್ಯರು ಬಲವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆ ತನ್ನ ಕೈಗಳನ್ನು ಮೇಲೆತ್ತಿದಾಗ ಇಸ್ರೇಲರು ಜಯಗಳಿಸಿದರು. ಆದರೆ ಮೋಶೆಯು ತನ್ನ ಕೈಗಳನ್ನು ಕೆಳಗಿಳಿಸಿದಾಗ ಅಮಾಲೇಕ್ಯರು ಜಯಗಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:11
8 ತಿಳಿವುಗಳ ಹೋಲಿಕೆ  

ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.


ಯೆಹೋಶುವನು ಮೋಶೆ ಅಪ್ಪಣೆ ಕೊಟ್ಟಂತೆ ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.


ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಕಲ್ಲನ್ನು ತಂದು ಇಟ್ಟಾಗ, ಅವನು ಅದರ ಮೇಲೆ ಕೂತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ಮೋಶೆಯ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವವರೆಗೆ ಅವನ ಕೈಗಳು ಇಳಿಯದೆ ನಿಂತೇ ಇದ್ದವು.


ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.


ನಾನು ನನ್ನ ಬಿಲ್ಲಿನಲ್ಲಿ ಭರವಸೆ ಇಡುವುದಿಲ್ಲ; ನನ್ನ ಖಡ್ಗವು ನನಗೆ ಜಯ ತರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು