Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:14 - ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:14
30 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.”


ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.


ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.


“ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ,


ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?


ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.


ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,


ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.


ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.


ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.


ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.


ಯೆಹೋಶುವನು ಅಮಾಲೇಕ್ಯರನ್ನೂ, ಅವನ ಜನರನ್ನೂ ಖಡ್ಗದಿಂದ ಸೋಲಿಸಿದನು.


ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.


“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.


ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು