ವಿಮೋಚನಕಾಂಡ 17:2 - ಕನ್ನಡ ಸಮಕಾಲಿಕ ಅನುವಾದ2 ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |