ವಿಮೋಚನಕಾಂಡ 17:3 - ಕನ್ನಡ ಸಮಕಾಲಿಕ ಅನುವಾದ3 ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು. ಅಧ್ಯಾಯವನ್ನು ನೋಡಿ |