ವಿಮೋಚನಕಾಂಡ 17:7 - ಕನ್ನಡ ಸಮಕಾಲಿಕ ಅನುವಾದ7 “ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು. ಅಧ್ಯಾಯವನ್ನು ನೋಡಿ |