Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:8 - ಕನ್ನಡ ಸಮಕಾಲಿಕ ಅನುವಾದ

8 ಅಮಾಲೇಕ್ಯರು ಬಂದು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅಮಾಲೇಕ್ಯರು ರೆಫೀದೀವಿುನಲ್ಲಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡುವದಕ್ಕೆ ಬರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ರೆಫೀದೀಮಿನಲ್ಲಿ ಅಮಾಲೇಕ್ಯರು ಬಂದು ಇಸ್ರೇಲರಿಗೆ ವಿರುದ್ಧವಾಗಿ ಯುದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:8
13 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.


ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”


ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,


ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.


ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.


ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,


ಅವನು ಸೈನ್ಯವನ್ನು ಕೂಡಿಸಿಕೊಂಡು, ಅಮಾಲೇಕ್ಯರನ್ನು ಸಂಹರಿಸಿದನು. ಇಸ್ರಾಯೇಲನ್ನು ಸುಲಿದುಕೊಳ್ಳುವವರ ಸಮಸ್ತರ ಕೈಗೂ ತಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು