ವಿಮೋಚನಕಾಂಡ 17:9 - ಕನ್ನಡ ಸಮಕಾಲಿಕ ಅನುವಾದ9 ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮೋಶೆಯು ಯೆಹೋಶುವನಿಗೆ - ನೀನು ಭಟರನ್ನು ಆದುಕೊಂಡು ನಾಳೆ ನಮ್ಮ ಮುಂದೆ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡಬೇಕು; ನಾನು ದೇವದಂಡವನ್ನು ಕೈಯಲ್ಲಿ ಹಿಡುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |