Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:1 - ಕನ್ನಡ ಸಮಕಾಲಿಕ ಅನುವಾದ

1 ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:1
33 ತಿಳಿವುಗಳ ಹೋಲಿಕೆ  

ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.


ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?


ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.


ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.


ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.


ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.


ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.


ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು