Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:11 - ಕನ್ನಡ ಸಮಕಾಲಿಕ ಅನುವಾದ

11 ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:11
30 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮಹಾ ದೇವರು, ಎಲ್ಲಾ ದೇವರುಗಳ ಮೇಲೆ ಮಹಾರಾಜರೂ ಆಗಿದ್ದಾರೆ.


ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?


“ನಾನು ಕಟ್ಟಿಸುವ ಆಲಯವು ದೊಡ್ಡದು. ಏಕೆಂದರೆ ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವರಾಗಿದ್ದಾರೆ.


ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.


ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ ಗರ್ವಿಷ್ಠರನ್ನು ನೀವು ಗದರಿಸುತ್ತೀರಿ.


ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”


ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.


“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.


“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.


ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.


“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


“ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.


ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.


ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು.


ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.


ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು