Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:12 - ಕನ್ನಡ ಸಮಕಾಲಿಕ ಅನುವಾದ

12 ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಸಮರ್ಪಿಸಿದನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:12
31 ತಿಳಿವುಗಳ ಹೋಲಿಕೆ  

ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.


ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು.


ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?


ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.


ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.


ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.


ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.


ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.


ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.


ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.


ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.


ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.


“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.


ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು