Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:21 - ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:21
49 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


“ಒಂದು ವೇಳೆ ನನಗೂ ನನ್ನ ದಾಸದಾಸಿಯರಿಗೂ ನನ್ನ ಮೇಲೆ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ತಿರಸ್ಕರಿಸಿದ್ದರೆ,


ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.


ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.


ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,


“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.


ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.


ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.


ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.


ಅವನ ಸಂಗಡ ಇಸ್ರಾಯೇಲಿನ ಗೋತ್ರದ ಪ್ರತಿಯೊಂದು ಗೋತ್ರದಿಂದ ಒಬ್ಬೊಬ್ಬನನ್ನು ಅಂದರೆ ಮುಖ್ಯಸ್ಥನ ಪ್ರಕಾರ ಹತ್ತು ಮಂದಿ ಪ್ರಧಾನರನ್ನೂ ಕಳುಹಿಸಿದರು.


ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.


ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.


ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.


ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.


ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಬಂದು ಅವನನ್ನು ಶಿಕ್ಷಿಸಬೇಕು.


“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು? ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?


ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು.


ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು