Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:5 - ಕನ್ನಡ ಸಮಕಾಲಿಕ ಅನುವಾದ

5 ಮೋಶೆಯ ಮಾವನಾದ ಇತ್ರೋವನ ಸಂಗಡ ಮೋಶೆಯ ಹೆಂಡತಿಯನ್ನೂ, ಅವನ ಪುತ್ರರನ್ನೂ ಮೋಶೆಯ ಬಳಿಗೆ ಅವನು ತಂಗಿದ್ದ ಮರುಭೂಮಿಯಲ್ಲಿ ದೇವರ ಬೆಟ್ಟದ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನು, ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೋಶೆಯ ಮಾವ ಇತ್ರೋ, ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಅರಣ್ಯದಲ್ಲಿ ದೇವರ ಬೆಟ್ಟದ ಹತ್ತಿರ ಇಳುಕೊಂಡಿದ್ದ ಮೋಶೆಯ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಮೋಶೆಯು ಮರುಭೂಮಿಯಲ್ಲಿ ದೇವರ ಬೆಟ್ಟವಾದ ಸೀನಾಯ್ ಬೆಟ್ಟದ ಬಳಿ ತಂಗಿದ್ದಾಗ ಇತ್ರೋನನು ಮೋಶೆಯ ಬಳಿಗೆ ಹೋದನು. ಇತ್ರೋನನ ಜೊತೆಯಲ್ಲಿ ಮೋಶೆಯ ಹೆಂಡತಿ ಮತ್ತು ಅವನ ಇಬ್ಬರು ಗಂಡುಮಕ್ಕಳು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:5
10 ತಿಳಿವುಗಳ ಹೋಲಿಕೆ  

ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.


ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.


ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು.


ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು.


ಅವರು ರೆಫೀದೀಮಿನಿಂದ ಹೊರಟು, ಸೀನಾಯಿ ಮರುಭೂಮಿಗೆ ಬಂದು, ಮರುಭೂಮಿಯಲ್ಲಿ ಡೇರೆ ಹಾಕಿ, ಬೆಟ್ಟಕ್ಕೆದುರಾಗಿ ಇಳಿದುಕೊಂಡರು.


ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು