ವಿಮೋಚನಕಾಂಡ 19:12 - ಕನ್ನಡ ಸಮಕಾಲಿಕ ಅನುವಾದ12 ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ, ‘ಅವರು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತು ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಜನರು ಹತ್ತಿರಕ್ಕೆ ಬಾರದಂತೆ ನೀನು ಬೆಟ್ಟದ ಸುತ್ತಲೂ ಒಂದು ಮೇರೆಯನ್ನು ಏರ್ಪಡಿಸು. ಮತ್ತು ಜನರಿಗೆ ‘ಎಚ್ಚರಿಕೆ, ನೀವು ಈ ಬೆಟ್ಟವನ್ನು ಏರಕೂಡದು; ಅದರ ಅಂಚನ್ನೂ ಮುಟ್ಟಕೂಡದು. ಮುಟ್ಟಿದವನಿಗೆ ಮರಣ ಶಿಕ್ಷೆಯಾಗುವುದು ನಿಶ್ಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಮೇರೆಯನ್ನು ಮಾಡಿಸಿ ಜನರಿಗೆ - ಎಚ್ಚರಿಕೆಯಾಗಿರ್ರಿ, ನೀವು ಈ ಬೆಟ್ಟವನ್ನು ಏರಲೂ ಕೂಡದು ಅದರ ಅಂಚನ್ನು ಮುಟ್ಟಲೂಕೂಡದು. ಮುಟ್ಟಿದವನಿಗೆ ಅಗತ್ಯವಾಗಿ ಪ್ರಾಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12-13 ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು. ಅಧ್ಯಾಯವನ್ನು ನೋಡಿ |