Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:16 - ಕನ್ನಡ ಸಮಕಾಲಿಕ ಅನುವಾದ

16 ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:16
31 ತಿಳಿವುಗಳ ಹೋಲಿಕೆ  

ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.


ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.


ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.


ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?


ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.


ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.


ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.


ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ.


ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.


ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.


ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.


ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.


ಅವನು ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ, ನೀವು ಲೈಂಗಿಕ ಸಂಬಂಧದಿಂದ ದೂರವಾಗಿರಿ,” ಎಂದನು.


ಆಗ ಮೋಶೆಯು ದೇವರನ್ನು ಸಂಧಿಸುವುದಕ್ಕೆ ಜನರನ್ನು ಪಾಳೆಯದೊಳಗಿಂದ ಹೊರಗೆ ಬರಮಾಡಿದನು. ಆಗ ಅವರು ಬೆಟ್ಟದ ಕೆಳಗೆ ನಿಂತುಕೊಂಡರು.


ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.


ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. ದೇವರು ಹೇಳಿದ್ದೇನೆಂದರೆ:


ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;


ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.


ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು