ವಿಮೋಚನಕಾಂಡ 19:19 - ಕನ್ನಡ ಸಮಕಾಲಿಕ ಅನುವಾದ19 ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತುತ್ತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ, ಮೋಶೆಯು ದೇವರ ಸಂಗಡ ಮಾತನಾಡಿದನು. ಆಗ ದೇವರು ಎತ್ತರದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತುತೂರಿಯ ಧ್ವನಿ ಹೆಚ್ಚಾಗುತ್ತಾ ಬಂದಾಗ ಮೋಶೆಯು [ದೇವರ ಸಂಗಡ] ಮಾತಾಡಿದನು; ಆಗ ದೇವರು ಬಾಯಿ ಮಾತಿನಿಂದ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ತುತ್ತೂರಿಯ ಧ್ವನಿ ಹೆಚ್ಚುಹೆಚ್ಚಾಯಿತು. ಮೋಶೆಯು ದೇವರೊಂದಿಗೆ ಮಾತಾಡಿದಾಗಲೆಲ್ಲಾ ದೇವರು ಗುಡುಗಿನಂತಿದ್ದ ಧ್ವನಿಯಲ್ಲಿ ಅವನಿಗೆ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |