ವಿಮೋಚನಕಾಂಡ 19:22 - ಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನ ಸನ್ನಿಧಿಗೆ ಬರುವ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳಬೇಕು. ಇಲ್ಲವಾದರೆ ಯೆಹೋವನು ಪಕ್ಕನೆ ಅವರನ್ನೂ ಸಂಹಾರಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನ್ನ ಸನ್ನಿಧಿಗೆ ಬರುವ ಯಾಜಕರು ಕೂಡ ತಮ್ಮನ್ನೇ ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವಸನ್ನಿಧಿಗೆ ಸೇರುವ ಯಾಜಕರೂ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ಯೆಹೋವನು ಫಕ್ಕನೆ ಸಂಹಾರಮಾಡಾನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮಾತ್ರವಲ್ಲದೆ ನನ್ನ ಸಮೀಪಕ್ಕೆ ಬರುವ ಯಾಜಕರು ಈ ವಿಶೇಷ ಸಂದರ್ಶನಕ್ಕಾಗಿ ತಮ್ಮನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಹೇಳು. ಇಲ್ಲವಾದರೆ ನಾನು ಅವರನ್ನೂ ಶಿಕ್ಷಿಸುವೆನು” ಅಂದನು. ಅಧ್ಯಾಯವನ್ನು ನೋಡಿ |