Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಅವನಿಗೆ - ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರೂ ಜನರೂ ಆ ಮೇರೆಯನ್ನು ದಾಟಿ ಯೆಹೋವನ ಹತ್ತಿರ ಬರಕೂಡದು; ದಾಟಿದರೆ ಯೆಹೋವನು ಅವರನ್ನು ಫಕ್ಕನೆ ಸಂಹಾರ ಮಾಡಾನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:24
20 ತಿಳಿವುಗಳ ಹೋಲಿಕೆ  

ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.


ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ಆಗ ಮೋಶೆ, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಮೇಲಕ್ಕೆ ಹೋದರು.


ತರುವಾಯ ಯೆಹೋವ ದೇವರು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವ ದೇವರಾದ ನನ್ನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.


ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ, ‘ಅವರು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತು ಹೋಗುವರು.


ಮೋಶೆಯು ಜನರ ಬಳಿಗೆ ಇಳಿದು ಹೋಗಿ ಅವರಿಗೆ ಇದನ್ನೆಲ್ಲಾ ಹೇಳಿದನು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು