ವಿಮೋಚನಕಾಂಡ 19:5 - ಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿ |