Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:9 - ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:9
25 ತಿಳಿವುಗಳ ಹೋಲಿಕೆ  

ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.


ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.


ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.


ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ;


ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.


ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.


ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು