Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:11 - ಕನ್ನಡ ಸಮಕಾಲಿಕ ಅನುವಾದ

11 ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ದೊಡ್ಡವನಾದ ಮೇಲೆ ಸ್ವಜನರ ಬಳಿಗೆ ಹೋಗಿ ಇವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಒಂದು ದಿವಸ ಅವನು ತನ್ನ ಜನರಾದ ಇಬ್ರಿಯರೊಳಗೆ ಒಬ್ಬನನ್ನು ಐಗುಪ್ತ್ಯನೊಬ್ಬನು ಹೊಡೆಯುವದನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:11
13 ತಿಳಿವುಗಳ ಹೋಲಿಕೆ  

ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು.


ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.


ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.


ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು