Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:15 - ಕನ್ನಡ ಸಮಕಾಲಿಕ ಅನುವಾದ

15 ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸಿದ್ದರಿಂದ ಮೋಶೆ ಫರೋಹನ ಬಳಿಯಿಂದ ಓಡಿಹೋಗಿ ವಿುದ್ಯಾನ್ ದೇಶವನ್ನು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:15
17 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು.


ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.


ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.


ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.


ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.


ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.


ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


“ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.


ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು