ವಿಮೋಚನಕಾಂಡ 2:16 - ಕನ್ನಡ ಸಮಕಾಲಿಕ ಅನುವಾದ16 ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅಲ್ಲಿ ಒಂದು ಬಾವಿಯ ಹತ್ತಿರ ಕೂತುಕೊಂಡಿರಲು ವಿುದ್ಯಾನ್ಯರ ಆಚಾರ್ಯನ ಏಳುಮಂದಿ ಹೆಣ್ಣುಮಕ್ಕಳು ಬಂದು ತಂದೆಯ ಕುರಿಗಳಿಗೆ ಕುಡಿಸುವದಕ್ಕೋಸ್ಕರ ನೀರು ಸೇದಿ ದೋಣಿಗಳಲ್ಲಿ ಹಾಕುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು. ಅಧ್ಯಾಯವನ್ನು ನೋಡಿ |