Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:20 - ಕನ್ನಡ ಸಮಕಾಲಿಕ ಅನುವಾದ

20 ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರ ತಂದೆ ಅವರಿಗೆ - ಆ ಮನುಷ್ಯನೆಲ್ಲಿ? ಅವನನ್ನು ಯಾಕೆ ಬಿಟ್ಟು ಬಂದಿರಿ? ಊಟ ಮಾಡುವದಕ್ಕೆ ಕರೆಯಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:20
12 ತಿಳಿವುಗಳ ಹೋಲಿಕೆ  

ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.


ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.


ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.


ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.


ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು