Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:23 - ಕನ್ನಡ ಸಮಕಾಲಿಕ ಅನುವಾದ

23 ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:23
31 ತಿಳಿವುಗಳ ಹೋಲಿಕೆ  

ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.


ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.


ಅದು ಸೇನಾಧೀಶ್ವರ ಯೆಹೋವ ದೇವರಿಗೆ ಈಜಿಪ್ಟ್ ದೇಶದಲ್ಲಿ ಗುರುತಾಗಿ ಸಾಕ್ಷಿಯಾಗಿರುವುದು. ಏಕೆಂದರೆ ಹಿಂಸಕರ ದೆಸೆಯಿಂದ ಯೆಹೋವ ದೇವರನ್ನು ಕೂಗಿಕೊಳ್ಳಲು, ದೇವರು ಅವರಿಗೆ ಒಬ್ಬ ಶೂರನಾದ ರಕ್ಷಕನನ್ನು ಕಳುಹಿಸಿ, ಅವರನ್ನು ಬಿಡುಗಡೆ ಮಾಡುವರು.


ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.


ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.


ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.


ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ಅವರು ಫರೋಹನ ಮುಂದೆ ಮಾತನಾಡುವಾಗ ಮೋಶೆಯು ಎಂಬತ್ತು ವರ್ಷದವನೂ ಆರೋನನು ಎಂಬತ್ತಮೂರು ವರ್ಷದವನೂ ಆಗಿದ್ದನು.


ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.


ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.


ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.


“ಯಾಕೋಬನು ಈಜಿಪ್ಟಿಗೆ ಬಂದ ತರುವಾಯ, ನಿಮ್ಮ ತಂದೆಗಳು ಯೆಹೋವ ದೇವರಿಗೆ ಮೊರೆಯಿಟ್ಟರು. ಆಗ ಯೆಹೋವ ದೇವರು ಮೋಶೆಯನ್ನೂ, ಆರೋನನನ್ನೂ ಕಳುಹಿಸಿದರು. ಇವರು ನಿಮ್ಮ ಪಿತೃಗಳನ್ನು ಈಜಿಪ್ಟಿನಿಂದ ಕರೆತಂದು, ಅವರನ್ನು ಈ ದೇಶದಲ್ಲಿ ವಾಸಿಸುವಂತೆ ಮಾಡಿದರು.


“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಯು ನಿಮಗೆ ಮುಟ್ಟಲಿ.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ, ಸಹಾಯಮಾಡಿರಿ; ನಾನು ಕರೆಯುವಾಗ ನನ್ನ ಕಡೆಗೆ ತಿರುಗಿರಿ, ಬೇಗನೇ ನನಗೆ ಉತ್ತರಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು