ವಿಮೋಚನಕಾಂಡ 2:6 - ಕನ್ನಡ ಸಮಕಾಲಿಕ ಅನುವಾದ6 ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದನ್ನು ತೆರೆದು ನೋಡುವಾಗ ಆಹಾ, ಅಳುವ ಕೂಸು. ಆಕೆ ಅದರ ಮೇಲೆ ಕನಿಕರಪಟ್ಟು - ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದೆಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |