ವಿಮೋಚನಕಾಂಡ 20:19 - ಕನ್ನಡ ಸಮಕಾಲಿಕ ಅನುವಾದ19 ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ನಾವು ಕೇಳುತ್ತೇವೆ. ದೇವರು ನಮ್ಮ ಸಂಗಡ ಮಾತನಾಡಿದರೆ ನಾವು ಸತ್ತು ಹೋಗುತ್ತೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಮೋಶೆಗೆ - ನೀನೇ ನಮ್ಮ ಸಂಗಡ ಮಾತಾಡು; ನಾವು ಕೇಳುವೆವು. ದೇವರು ನಮ್ಮ ಸಂಗಡ ಮಾತಾಡಿದರೆ ನಾವು ಸತ್ತೇವು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು. ಅಧ್ಯಾಯವನ್ನು ನೋಡಿ |