Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:20 - ಕನ್ನಡ ಸಮಕಾಲಿಕ ಅನುವಾದ

20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:20
22 ತಿಳಿವುಗಳ ಹೋಲಿಕೆ  

ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.


ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.


ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ.


ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!


ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು