Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:22 - ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಹೇಳಿದರು: “ಇಸ್ರಯೇಲರಿಗೆ ಹೀಗೆಂದು ತಿಳಿಸು - ‘ನಾನು ಆಕಾಶದಿಂದ ನಿಮ್ಮೊಡನೆ ಮಾತಾಡಿದ್ದೇನೆಂದು ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನಾನು ಆಕಾಶದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೋಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:22
6 ತಿಳಿವುಗಳ ಹೋಲಿಕೆ  

“ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.


ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.


ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ?


“ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.


ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು