Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:23 - ಕನ್ನಡ ಸಮಕಾಲಿಕ ಅನುವಾದ

23 ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದದರಿಂದ ನೀವು ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಂಡು ನನ್ನ ಜೊತೆಯಲ್ಲಿ ಸೇರಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:23
21 ತಿಳಿವುಗಳ ಹೋಲಿಕೆ  

“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.


ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


“ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.


“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?


ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು